ಕುಮಾರಸ್ವಾಮಿ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ : ಡಿ.ಕೆ.ಶಿವಕುಮಾರ್

Update: 2025-04-15 18:44 IST
ಕುಮಾರಸ್ವಾಮಿ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ : ಡಿ.ಕೆ.ಶಿವಕುಮಾರ್
  • whatsapp icon

ಬೆಂಗಳೂರು: ‘ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ವಿಚಾರ ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಇಲ್ಲಿನ ಮಹಾಲಕ್ಷ್ಮಿ ಲೇಔಟ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಇದು ಜಾತಿಗಣತಿಯೋ ಅಥವಾ ದ್ವೇಷಗಣತಿಯೋ’ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ ಎಂದು ದೂರಿದರು.

‘ನಮ್ಮ ಪಕ್ಷ ತನ್ನದೇ ಆದ ತತ್ವ-ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರಕಾರ ಅನೇಕ ತೀರ್ಮಾನ ಮಾಡಲಿದೆ ಎಂದು ಅವರು ತಿರುಗೇಟು ನೀಡಿದರು.

ನಾನು ಸರ್ವಜ್ಞನೂ ಅಲ್ಲ: ಸಂಪುಟ ಸಭೆಯಲ್ಲಿ ನಮ್ಮ ವಿಚಾರವನ್ನು ಹೇಗೆ ಮಂಡಿಸಬೇಕು, ಯಾವ ರೀತಿ ಸಲಹೆ ನೀಡಬೇಕೆಂದು ಚರ್ಚೆ ಮಾಡಬೇಕಲ್ಲವೇ?. ಹೀಗಾಗಿ ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳ ಸಭೆ ಕರೆದಿದ್ದು, ನಾನು ಸರ್ವಜ್ಞನಲ್ಲ. ದೊಡ್ಡ ಪಂಡಿತನೂ ಅಲ್ಲ. ನಾನು ಹಳ್ಳಿಯಿಂದ ಬಂದು ಬೆಂಗಳೂರು ಸೇರಿರುವವನು. ಗಣತಿ ವರದಿ ಸೇರಿ ಎಲ್ಲವನ್ನು ಚರ್ಚೆ ಮಾಡಬೇಕಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News