ಒಕ್ಕಲಿಗರಿಗೆ ಅಪಮಾನ ; ಸಮುದಾಯದ ನಾಯಕರು, ಸ್ವಾಮೀಜಿಗಳು ಮಾತಾಡಬೇಕು : ಡಿ.ಕೆ.ಶಿವಕುಮಾರ್

Update: 2024-09-17 07:15 GMT

ಬೆಂಗಳೂರು : "ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುನಿರತ್ನ ಅವಹೇಳನದ ಬಗ್ಗೆ ಮಾತನಾಡಲು ದೊಡ್ಡ ದೊಡ್ಡ ನಾಯಕರಿದ್ದಾರೆ, ಅವರು ಮಾತಾಡಬೇಕು. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಪ್ರತಿಕ್ರಿಯೆ ನೀಡಬೇಕು. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು. ಸರಿಯಿದ್ದರೆ ಸರಿ, ತಪ್ಪಿದ್ದರೆ ತಪ್ಪು ಎಂದು ಹೇಳಬೇಕು" ಎಂದರು.

ಅಮೆರಿಕದಲ್ಲಿ ರಾಹುಲ್ ಗಾಂಧಿ ಅವರ ಭೇಟಿ ಹಾಗೂ ಚರ್ಚೆಯ ವಿಚಾರದ ಬಗ್ಗೆ ಕೇಳಿದಾಗ, "ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ನಿಮಗೆ (ಮಾಧ್ಯಮದವರಿಗೆ) ಹೇಳಲಾಗುತ್ತದೆಯೇ? ನನ್ನ ತಮ್ಮ, ಹೆಂಡತಿ ಮತ್ತು ಸ್ವಾಮೀಜಿಯವರ ಬಳಿ ಏನು ಮಾತನಾಡುತ್ತೇನೆ ಎಂಬುದನ್ನು ನಿಮ್ಮ ಬಳಿ ಹೇಳಲು ಆಗುತ್ತದೆಯೇ?" ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News