ಹೊಸ ವರ್ಷಾಚರಣೆಗೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್
Update: 2023-12-29 16:27 GMT
ಬೆಂಗಳೂರು: ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಡಿ.31ರಂದು ರಾತ್ರಿ ನಡೆಯುವ ಹೊಸ ವರ್ಷದ ಸಂಭ್ರಮಾಚರಣೆಗೆ ಬಂದು ಹೋಗುವವರ ಅನುಕೂಲಕ್ಕಾಗಿ ಬಿಎಂಟಿಸಿಯು ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಡಿ.31ರ ರಾತ್ರಿ 11ಗಂಟೆಯಿಂದ ತಡರಾತ್ರಿ 2 ಗಂಟೆಯ ವರೆಗೆ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್‍ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಜೈವಿಕ ಉದ್ಯಾನ, ಕೆಂಗೇರಿ ಕೆಎಚ್‍ಬಿ ಕ್ವಾರ್ಟರ್ಸ್, ಜನಪ್ರಿಯ ಟೌನ್‍ಶಿಪ್, ನೆಲಮಂಗಲ, ಯಲಹಂಕ 5ನೆ ಹಂತ, ಆರ್.ಕೆ.ಹೆಗಡೆನಗರ, ಬಾಗಲೂರು, ಹೊಸಕೋಟೆಗೆ ಬಸ್ ಸೇವೆ ಕಲ್ಪಿಸಲಾಗಿದೆ.