ನಿಗಮ-ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2023-12-18 06:36 GMT

ಬೆಂಗಳೂರು, ಡಿ.18: "ನಾನು ಹಾಗೂ ಮುಖ್ಯಮಂತ್ರಿ ದಿಲ್ಲಿಗೆ ತೆರಳುತ್ತಿದ್ದು, ನಿಗಮ-ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದಿಲ್ಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವ ನಗರ ನಿವಾಸದ ಬಳಿ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

"ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದಿಲ್ಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ" ಎಂದು ತಿಳಿಸಿದರು.

ಮುಖ್ಯಮಂತ್ರಿಯ ಭೇಟಿಗೆ ಪ್ರಧಾನ ಮಂತ್ರಿ ಸಮಯಾವಕಾಶ ನೀಡಿದ್ದಾರಂತಲ್ಲ ಎಂದು ಕೇಳಿದಾಗ, "ಅವರು ಹೋಗಿ ಭೇಟಿ ಮಾಡುತ್ತಾರೆ" ಎಂದು ತಿಳಿಸಿದರು.

ಡಿ.21ಕ್ಕೆ ಸಿಡಬ್ಲ್ಯುಸಿ ಸಭೆ ಬಗ್ಗೆ ಕೇಳಿದಾಗ, "ಇಲ್ಲೂ ಇದೆ, ನಾಗಪುರದಲ್ಲೂ ಇದೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News