ಬೆಂಗಳೂರು| ಗೂಡ್ಸ್ ವಾಹನ ಹರಿದು ಬಾಲಕ ಮೃತ್ಯು

Update: 2024-10-13 14:39 GMT

ಬೆಂಗಳೂರು: ಗೂಡ್ಸ್ ವಾಹನ ಹರಿದು ಬಾಲಕನೋರ್ವ ಮೃತಪಟ್ಟಿರುವ ಘಟನೆ ನಗರದ ಕೆ.ಜಿ.ಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ತಾಹಿರ್ ಪಾಷಾ(5) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಓಡಿ ಬರುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಚಲಿಸುತ್ತಿದ್ದ ಗೂಡ್ಸ್ ವಾಹನದ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದಾಗ ಗೂಡ್ಸ್ ವಾಹನದ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪೋಷಕರು ನೀಡಿದ ದೂರಿನನ್ವಯ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News