ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
Update: 2024-02-18 14:27 GMT
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ನಾಲ್ಕು ದಿನಗಳ ಹಿಂದೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಇದೀಗ ತಮ್ಮ ಆರೋಗ್ಯದಲ್ಲಿ ಚೇತರಿಕೆಯಾದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ದೇವೇಗೌಡ ವಿಶ್ರಾಂತಿ ಪಡೆಯುತ್ತಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿರುವ ದೇವೇಗೌಡರಿಗೆ ಗುರುವಾರ ಬೆಳಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಅವರು ಆಸ್ಪತ್ರೆಯಿಂದ ಮನೆಗೆ ಹಿಂದಿರುಗಿದ್ದಾರೆ.