ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನಿಯರ ಮಾಹಿತಿ ಕಲೆಹಾಕಲು ಸೂಚನೆ : ಡಾ.ಜಿ.ಪರಮೇಶ್ವರ್
Update: 2025-04-26 20:48 IST
ಬೆಂಗಳೂರು: ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳನ್ನು ವಾಪಸ್ ಕಳುಹಿಸುವ ಪ್ರಕ್ರಿಯೆ ಸಂಬಂಧ ಮಾಹಿತಿ ಕಲೆಹಾಕಲು ಎಲ್ಲ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಗಳಿಗೂ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ಸೂಚನೆ ಬಂದಿದ್ದು, ಅದರಂತೆ ರಾಜ್ಯದ ಎಲ್ಲ ಎಸ್ಪಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಎಷ್ಟು ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದಾರೆ ಎಂದು ಪತ್ತೆಹಚ್ಚಲಾಗುತ್ತಿದೆ. ಪಾಕಿಸ್ತಾನ ವಿದ್ಯಾರ್ಥಿಗಳಿದ್ದರೂ ವಾಪಸ್ ಕಳುಹಿಸಬೇಕಾಗುತ್ತದೆ ಎಂದು ತಿಳಿಸಿದರು.