ಹಿರಿಯ ನಟಿಗೆ ಚಿಕಿತ್ಸೆಯ ಅಗತ್ಯಬಿದ್ದರೆ ವೆಚ್ಚ ಭರಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ

Update: 2023-12-03 14:30 GMT

PHOTO:x//@CMofKarnataka

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜವಾಗಿ ಕಾಯಿಲೆ ಬಳಲುತ್ತಿದ್ದು ಅವರಿಗೆ ಚಿಕಿತ್ಸೆಯ ಅಗತ್ಯಬಿದ್ದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆನೀಡಿದರು.

ಇಂದು ಅವರು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಈ ಬಗ್ಗೆ ಎಕ್ಸ್‌ ನಲ್ಲಿ ಬರೆದುಕೊಂಡಿರುವ ಅವರು, " ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ"

ʼಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದುʼ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News