ರಾಜ್ಯಪಾಲರನ್ನು ಕೂಡಲೇ ವಾಪಸ್ ಕರೆಸಿಕೊಳ್ಳಿ : ಲೇಖಕರು-ಚಿಂತಕರಿಂದ ರಾಷ್ಟ್ರಪತಿಗೆ ಪತ್ರ

Update: 2024-08-20 15:50 GMT

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ಕರ್ನಾಟಕದ ಜನತೆಗೆ ಆಘಾತ ಮತ್ತು ನಿರಾಶೆಯನ್ನುಂಟು ಮಾಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆದುಕೊಳ್ಳುತ್ತಿದ್ದು, ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಪ್ರಗತಿಪರ ಲೇಖಕರು ಚಿಂತಕರು ಸೇರಿದಂತೆ ರಾಜ್ಯದ ಗಣ್ಯರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಮಂಗಳವಾರ ಪ್ರೊ.ನಿರಂಜನಾರಾಧ್ಯ ವಿ.ಪಿ., ಬಸವರಾಜ ಸೂಳಿಭಾವಿ, ರಂಜಾನ್ ದರ್ಗಾ, ಡಾ. ಎಚ್.ಎಸ್.ಅನುಪಮಾ, ಡಿ.ಉಮಾಪತಿ, ಡಾ.ವಿಜಯಾ, ಎಂ.ಅಬ್ದುಲ್ ರೆಹಮಾನ್ ಪಾಷ ಸೇರಿದಂತೆ ಮತ್ತಿತರ 207 ಮಂದಿ ಗಣ್ಯರು ಕರ್ನಾಟಕದ ಜನತೆಯ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿರುವ ರಾಜ್ಯಪಾಲರನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಾಸಿಕ್ಯೂಷನ್ ಮಂಜೂರಾತಿಗೆ ಸಂಬಂಧಿಸಿದಂತೆ ಮಂತ್ರಿ ಮಂಡಳಿಯ ಸಲಹೆಯನ್ನು ಪಡೆಯುವ ಸಾಂವಿಧಾನಿಕ ಆದೇಶವನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ತಮ್ಮ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಆದೇಶವನ್ನು ಸರಿಯಾಗಿ ಓದದೇ ಸುಪ್ರೀಂ ಕೋರ್ಟ್ ತೀರ್ಪಿನ್ನು ಓದಿಕೊಂಡಿದ್ದಾರೆ ಎಂದು ಪತ್ರದಲ್ಲಿ ಟೀಕಿಸಿದ್ದಾರೆ.

ಅವರು ಬಿಜೆಪಿಯ ರಾಜಕೀಯ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಬಿಜೆಪಿ ಮತ್ತು ಜೆಡಿ(ಎಸ್) ರಾಜಕೀಯ ಪಕ್ಷಗಳ ಸ್ಥಾಪಿತ ರಾಜಕೀಯ ಹಿತಾಸಕ್ತಿ ಮತ್ತು ಅವರ ಸೂಚನೆಗಳ ಮೇರೆಗೆ ಜನಪ್ರಿಯವಾಗಿ ಚುನಾಯಿತ ಕರ್ನಾಟಕ ಸರಕಾರವನ್ನು ಅಸ್ಥಿರಗೊಳಿಸಲು ಥಾವರ್ ಚಂದ್ ಗೆಹ್ಲೋಟ್ ರಾಜಭವನವನ್ನು ರಾಜಕೀಯ ಪಿತೂರಿಯ ಕೇಂದ್ರಬಿಂದುವನ್ನಾಗಿ ಪರಿವರ್ತಿಸಿದ್ದಾರೆ ಎಂದು ಪ್ರಗತಿಪರರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಪ್ರತಿಪಕ್ಷದ ನಾಯಕರಿಂದ ಘೋಷಿಸಬೇಕೆಂಬ ಬೇಡಿಕೆಯು ಈ ವಿರೋಧ ಪಕ್ಷಗಳ ಹಿತಾಸಕ್ತಿಗಳನ್ನು ನಿರ್ವಹಿಸಲು ರಾಜ್ಯಪಾಲರು ಕಾರ್ಯನಿರ್ವಹಿಸುತ್ತಿದ್ದಾರೆ. ಆದುದರಿಂದ ರಾಜ್ಯಪಾಲರ ಸ್ಥಾನದಿಂದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಹಿಂಪಡೆಯಬೇಕು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News