ಪದವೀಧರ-ಶಿಕ್ಷಕರ ಕ್ಷೇತ್ರ ಚುನಾವಣೆ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

Update: 2024-05-03 13:56 GMT

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು, ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ-2024ರ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಅದರಂತೆ ಮೇ 2ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಜೂ.3ರಂದು ಮತದಾನ ಹಾಗೂ ಜೂ.6ರಂದು ಮತ ಎಣಿಕೆ ನಡೆಯಲಿದೆ. ಅರ್ಹ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರುಗಳನ್ನು ಸೇರ್ಪಡೆಗೊಳಿಸಲು ಮೇ 6ರ ಸಂಜೆ 5-30ರ ವರೆಗೆ ಕಾಲಾವಕಾಶವಿದ್ದು, ಬೆಂಗಳೂರು ಪದವೀಧರರ ಕ್ಷೇತ್ರದ ವ್ಯಾಪ್ತಿಯ ಅರ್ಹ ಮತದಾರರು ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಬೆಂಗಳೂರು ಪದವೀಧರರ ಕ್ಷೇತ್ರದ ವ್ಯಾಪ್ತಿಯ ಬೆಂಗಳೂರು ನಗರ, ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ ಅರ್ಹ ಪದವೀಧರರು ನಮೂನೆ-18ರಲ್ಲಿ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ (ಹರಿಹರ, ದಾವಣಗೆರೆ ಮತ್ತು ಜಗಳೂರು ತಾಲೂಕುಗಳು ಮಾತ್ರ) ಜಿಲ್ಲೆಗಳ ವ್ಯಾಪ್ತಿಯ ಅರ್ಹ ಶಿಕ್ಷಕರು ನಮೂನೆ-19ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಬೆಂಗಳೂರು ವಿಭಾಗದ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News