ಬೆಳ್ತಂಗಡಿಯ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಅನುದಾನ : ಸತೀಶ್ ಜಾರಕಿಹೊಳಿ
Update: 2025-03-12 23:21 IST

ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು : ಬೆಳ್ತಂಗಡಿಯಲ್ಲಿನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಆದಷ್ಟು ಶೀಘ್ರವಾಗಿ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿನ ನ್ಯಾಯಾಲಯ ಸಂಕೀರ್ಣ ಕಟ್ಟಡ ಹಾಗೂ ಪೀಠೋಪಕರಣಗಳ ಪೂರೈಕೆ ಕಾಮಗಾರಿಗೆ 13.92 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಫೆ.24, 2025ರಂದು ಆರ್ಥಿಕ ಇಲಾಖೆಗೆ ಪ್ರಸ್ತಾವವನ್ನು ಕಳುಹಿಸಿಕೊಡಲಾಗಿದೆ. ಆರ್ಥಿಕ ಇಲಾಖೆಯ ಅನುಮೋದನೆ ನಂತರ ಅನುದಾನ ಬಿಡುಗಡೆ ಮಾಡಿ ಆದಷ್ಟು ಕೂಡಲೇ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.