ಮಾರ್ಚ್‍ನಿಂದ ರಾಜ್ಯ ಪ್ರವಾಸ : ಎಚ್.ಡಿ.ದೇವೇಗೌಡ

Update: 2025-01-26 19:35 IST
ಮಾರ್ಚ್‍ನಿಂದ ರಾಜ್ಯ ಪ್ರವಾಸ : ಎಚ್.ಡಿ.ದೇವೇಗೌಡ

 ಎಚ್.ಡಿ.ದೇವೇಗೌಡ

  • whatsapp icon

ಬೆಂಗಳೂರು : ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು

ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಅವರು ದೇಶದ ಉದ್ದಗಲಕ್ಕೂ ಸಂಚಾರ ಮಾಡಿ ಕೆಲಸ ಮಾಡಬೇಕಿದೆ. ನಾನು, ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ಎಲ್ಲ ಹಿರಿಯ-ಕಿರಿಯ ಮುಖಂಡರೆಲ್ಲ ಸೇರಿ ಕಾರ್ಯಕರ್ತರ ಪಡೆಯೊಂದಿಗೆ ಪಕ್ಷ ಕಟ್ಟುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ. ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News