ʼಹುಟ್ಟುಹಬ್ಬ ಆಚರಿಸುವುದಿಲ್ಲʼ : ಜೆಡಿಎಸ್ ಕಾರ್ಯಕರ್ತರಿಗೆ ಪತ್ರ ಬರೆದ ಎಚ್.ಡಿ.ದೇವೇಗೌಡ
ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಇದರ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಪತ್ರ ಬರೆದಿದ್ದು, ಈ ವರ್ಷ ಕಾರಣಾಂತರಗಳಿಂದ ನಾನು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ, ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರಿಗೆ ಇದೇ ಮೇ.18ಕ್ಕೆ 91 ವರ್ಷ ಪೂರೈಸಿ, 92ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಆದರೆ, ಈ ಬಾರಿ ಕಾರಣಾಂತರಗಳಿಂದ ಅವರು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದು ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರಲ್ಲಿ ವಿನಂತಿಸಿಕೊಂಡಿದ್ದಾರೆ.
ಅಲ್ಲದೆ, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನವಾಣೆ ಘೋಷಣೆಯಾಗಿದ್ದು, ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.