'ಮಹಿಳಾ ವೈದ್ಯರೇ ಅತ್ಯಾಚಾರ ಸಂತ್ರಸ್ತೆಯನ್ನು ಪರೀಕ್ಷಿಸಲಿ' : ಬಿಎನ್‌ಎಸ್‌ಗೆ ತಿದ್ದುಪಡಿಗೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Update: 2024-07-30 07:40 GMT
ಬೆಂಗಳೂರು : ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಮಹಿಳಾ ವೈದ್ಯರು ಪರೀಕ್ಷಿಸಲು ಅವಕಾಶ ನೀಡುವಂತೆ ಇತ್ತೀಚಿಗೆ ಜಾರಿಗೆ ತಂದಿರುವ ಬಿಎನ್‌ಎಸ್‌ಗೆ ತಿದ್ದುಪಡಿ ತರಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಸಂತ್ರಸ್ತೆಯ ಖಾಸಗಿತನದ ಹಕ್ಕನ್ನು ರಕ್ಷಣೆ ಮಾಡಬೇಕಾಗಿದ್ದು, ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಂದಲೇ ವೈದ್ಯಕೀಯ ಪರೀಕ್ಷೆ ನಡೆಸುವ ಕುರಿತಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ(ಬಿಎನ್ಎಸ್ಎಸ್) ಸೆಕ್ಷನ್ 184ನ್ನು ತಿದ್ದುಪಡಿ ತರಲು ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.
ಅತ್ಯಾಚಾರ ಮತ್ತು ಕೊಲೆ ಯತ್ನ ಆರೋಪ ಎದುರಿಸುತ್ತಿರುವ ಅಜಯ್ ಕುಮಾರ್ ಭೇರಾ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಈ ಸೂಚನೆ ನಿಡಿದೆ. ಅಲ್ಲದೆ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.