ಪರಶುರಾಮ ಪ್ರತಿಮೆ ನಿರ್ಮಾಣದಲ್ಲಿ ಅಕ್ರಮ ವಿಚಾರ | ಪ್ರತ್ಯೇಕ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Update: 2024-08-14 17:25 GMT
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿ ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಕಂಚಿನ ಪ್ರತಿಮೆ ನಿರ್ಮಾಣ ಹಾಗೂ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಾರ್ಕಳ ತಾಲೂಕಿಮ ನಲ್ಲೂರು ಗ್ರಾಮದ ನಿವಾಸಿ ಕೃಷ್ಣಾ ಎ. ಶೆಟ್ಟಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಸಿಐಡಿ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರವೇಶ ಮಾಡಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.