ಬಿ.ವೈ.ವಿಜಯೇಂದ್ರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
Update: 2024-12-17 16:59 GMT
ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ ನೀಡಿದೆ.
ಈ ಹಿಂದೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು.
ನಗರದ ಆದರ್ಶ್ ಅಯ್ಯರ್ ಖಾಸಗಿ ದೂರು ದಾಖಲಿಸಿದ್ದರು. ಈ ಹಿಂದೆ ನಳಿನ್ ಕುಮಾರ್ ಕಟೀಲ್ ವಿರುದ್ಧದ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ , ಇಂದು ಬಿ.ವೈ.ವಿಜಯೇಂದ್ರ ವಿರುದ್ಧದ ಪ್ರಕರಣ ಕೂಡಾ ರದ್ದುಗೊಳಿಸಿ ಆದೇಶಿದೆ.