ಜೆ.ಪಿ.ನಡ್ಡಾ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಸೂಚನೆ
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟೀಯ ಮುಖ್ಯಸ್ಥ ಅಮಿತ್ ಮಾನವಿಯಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆ ಮುಂದುವರಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಪ್ರಕರಣ ಕುರಿತು ತಮ್ಮ ವಿರುದ್ಧ ಎಫ್ಐಆರ್ ರದ್ದು ಕೋರಿ ಜೆ.ಪಿ.ನಡ್ಡಾ ಮತ್ತು ಅಮಿತ್ ಮಾಳವಿಯಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮೇಲಿನ ಆದೇಶ ನೀಡಿದೆ. ಅಲ್ಲದೆ, ಪೊಲೀಸ್ ಠಾಣೆಯಲ್ಲಿ ತನಿಖೆ ಅಥವಾ ವಿಚಾರಣೆಗೆ ನಡ್ಡಾ ಅವರನ್ನು ಕರೆಸಬಾರದು ಹಾಗೂ ಅವರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ಸೂಚಿಸಿದೆ.
"ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮುಸ್ಲಿಂಯೇತರ ಸಮುದಾಯದವರ ಸಂಪತ್ತು ದೋಚಿ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ" ಎಂದು ಪ್ರಚುರಪಡಿಸಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಕಲಬುರಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.