ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ಒಂಬುಡ್ಸ್‌ಮನ್ ನೇಮಕ : ಎಚ್.ಕೆ.ಪಾಟೀಲ್

Update: 2025-02-01 21:10 IST
ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ಒಂಬುಡ್ಸ್‌ಮನ್ ನೇಮಕ : ಎಚ್.ಕೆ.ಪಾಟೀಲ್
  • whatsapp icon

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ಎಡಿಸಿ-ಎಸಿ ಒಳಗೊಂಡ ಒಂಬುಡ್ಸ್‌ ಮನ್ (ತನಿಖಾಧಿಕಾರಿ) ನೇಮಕ ಮಾಡಬೇಕು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ಸಂಬಂಧ ಕಂದಾಯ ಸಚಿವರು ಹಾಗೂ ಸರಕಾರ ಮುಖ್ಯ ಕಾರ್ಯದರ್ಶಿಯನ್ನೊಗೊಂಡ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‍ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕೆಂದು ಸಭೆಯಲ್ಲಿ ಎಚ್.ಕೆ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ ಆರ್‌ಬಿಐ ನೀತಿಗೆ ಅನುಗುಣವಾಗಿರಬೇಕು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಕಡ್ಡಾಯವಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳು ನೋಂದಣಿಯಾಗಿರಬೇಕು. ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನು ಸರಕಾರ ತಿರಸ್ಕರಿಸಬಹುದು. ಈ ಕಂಪೆನಿಗಳು ಸಾಲದ ಹೆಸರಲ್ಲಿ ಬಡ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನು ಅಡಮಾನ ಇರಿಸಿಕೊಳ್ಳುವಂತಿಲ್ಲ ಎಂದು ಎಚ್.ಕೆ.ಪಾಟೀಲ್ ಆದೇಶಿಸಿದರು.

ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬುದೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರಬೇಕು ಎಂದು ಸಚಿವ ಎಚ್.ಕೆ.ಪಾಟೀಲ್, ಅಧಿಕಾರಿಗಳಿಗೆ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News