ಖಾಸಗಿ ಸಹಭಾಗಿತ್ವದಲ್ಲಿ ಕೊಡವ ಹೆರಿಟೇಜ್ ಕೇಂದ್ರ ಅಭಿವೃದ್ಧಿ: ಎಚ್.ಕೆ.ಪಾಟೀಲ್

Update: 2025-03-06 23:25 IST
ಖಾಸಗಿ ಸಹಭಾಗಿತ್ವದಲ್ಲಿ ಕೊಡವ ಹೆರಿಟೇಜ್ ಕೇಂದ್ರ ಅಭಿವೃದ್ಧಿ: ಎಚ್.ಕೆ.ಪಾಟೀಲ್
  • whatsapp icon

ಬೆಂಗಳೂರು : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಗುರುವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಎಂ.ಪಿ.ಕುಶಾಲಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2013-14ನೇ ಸಾಲಿನಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು 268 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ನಂತರ ಈ ಕಾಮಗಾರಿಯನ್ನು 330 ಲಕ್ಷ ರೂ.ಗಳಲ್ಲಿ ಮುಗಿಸಲು ಆಡಳಿತಾತ್ಮಕ ಅನುಮೋದನೆಯನ್ನು ಮಡೆದುಕೊಂಡು 6 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ಇನ್ನೂ ಈ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಸಿ.ಎಸ್.ಆರ್. ಅನುದಾನದಡಿಯಲ್ಲಿ ಕಾಮಗಾರಿಯನ್ನು ಮಾಡಲು ಕೊಡಗು ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಕೋರಲಾಗಿತ್ತು. ಆದರೆ ಕೊಡಗಿನ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯವರು ಕಾಮಗಾರಿಯನ್ನು ಸಿಎಸ್.ಆರ್. ಅನುದಾನದಲ್ಲಿ ಕೈಗೊಂಡು ನಿರ್ವಹಣೆ ಮಾಡಲು ಕಷ್ಟಸಾಧ್ಯ ಎಂದಿದ್ದಾದ್ದಾರೆ. ಈ ಹಿನ್ನೆಲೆಯಲ್ಲಿ ಸದರಿ ಕಾಮಗಾರಿಯನ್ನು ಪಿ.ಪಿ.ಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಹಾಗೂ ಕಾರ್ಯಚರಣೆ ಮಾಡುವ ಬಗ್ಗೆ ಮಾರ್ಗದರ್ಶನ ಕೋರಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಿಗೆ ಪ್ರಸ್ತಾವ ಸಲ್ಲಿಸಿರುತ್ತಾರೆ. ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News