ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಕಾಮಗಾರಿ: ತನಿಖಾ ಸಮಿತಿಗಳನ್ನು ರದ್ದುಗೊಳಿಸಿದ ಸರಕಾರ

Update: 2023-12-18 15:29 GMT

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರ ವರೆಗೆ ಪ್ರಮುಖ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಯನ್ನು ನಡೆಸಲು ನಾಲ್ಕು ಪರಿಣಿತರ ತನಿಖಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿತ್ತು. ಆದರೆ ಇದನ್ನು ಸರಕಾರವು ರದ್ದುಪಡಿಸಿದೆ.

ಘನತ್ಯಾಜ್ಯ ನಿರ್ವಹಣೆ ಕಾಮಗಾರಿ, ರಸ್ತೆ ಅಭಿವೃದ್ಧಿ, ಓಎಫ್‍ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿ, ಕೇಂದ್ರ/ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ/ ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್‍ಸಿಟಿ ಯೋಜನೆಯಡಿಯ ಕಾಮಗಾರಿ ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸಿ 30 ದಿನಗಳಲ್ಲಿ ವರದಿ ಒಪ್ಪಿಸುವಂತೆ ಆದೇಶಿಸಲಾಗಿತ್ತು.

ಕಾಮಗಾರಿಗಳಲ್ಲಿ ನಡೆದಿವ ಅಕ್ರಮಗಳನ್ನು ತನಿಖೆ ನಡೆಸಲು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿ, ಸರಕಾರ ಆದೇಶಿಸಿತ್ತು. ಬಿಬಿಎಂಪಿ ಕಾಮಗಾರಿಗಳು ಇದರ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ನಾಲ್ಕು ಸಮಿತಿಗಳನ್ನು ರದ್ದುಪಡಿಸುವಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ಆದೇಶ ಹೊರ ಬಂದ ನಂತರ ನಾಲ್ಕು ಸಮಿತಿಗಳನ್ನು ಸರಕಾರ ರದ್ದುಪಡಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಅಕ್ರಮದ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಆಯೋಗಕ್ಕೆ ದೂರುಗಳನ್ನು ನೀಡಬೇಕು ಎಂದು ಸರಕಾರ ಇದೀಗ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News