‘ಒಳ ಮೀಸಲಾತಿ’ ವಿಚಾರಣಾ ಆಯೋಗದ ಕಚೇರಿ ಉದ್ಘಾಟನೆ
Update: 2025-01-02 13:47 GMT
ಬೆಂಗಳೂರು : ‘ಒಳ ಮೀಸಲಾತಿ’ ಕುರಿತು ಸರಕಾರಕ್ಕೆ ಶಿಫಾರಸ್ಸು ಮಾಡಲು ರಚಿಸಲಾಗಿರುವ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ವಿಚಾರಣಾ ಆಯೋಗದ ನೂತನ ಕಚೇರಿಯನ್ನು ಗುರುವಾರ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿ ಶುಭ ಕೋರಿದರು.
ನೂತನ ಕಚೇರಿಗೆ ಬೇಕಾಗುವ ಸವಲತ್ತುಗಳನ್ನು ಒದಗಿಸಿರುವ ಮಾಹಿತಿ ಸಂಗ್ರಹಿಸಿದ ಉಭಯ ಸಚಿವರು, ಒಳ ಮೀಸಲಾತಿಯ ವಿಚಾರಣಾ ಆಯೋಗಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಹಾಗೂ ಹೆಚ್ಚುವರಿ ಸೌಲಭ್ಯಗಳು ಬೇಕಾದಲ್ಲಿ ಸರಕಾರದ ಪರವಾಗಿ ಒದಗಿಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ವಿಧಾನಪರಿಷತ್ ಸದಸ್ಯರಾದ ಸುಧಾಮ ದಾಸ್ ಹಾಗೂ ವಸಂತ್ ಕುಮಾರ್ ಉಪಸ್ಥಿತರಿದ್ದರು.