ಬೆಂಗಳೂರಿನಲ್ಲಿ ಶಾಲಾ ವಾಹನಗಳ ತಪಾಸಣೆ: 23 ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲು

Update: 2024-07-09 15:11 GMT

Photo:X/@DCPTrEastBCP

ಬೆಂಗಳೂರು: ಮದ್ಯ ಕುಡಿದು ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ನಗರಾದ್ಯಂತ ವಿಶೇಷ ಕಾರ್ಯಾಚರಣೆ ಕೈಗೊಂಡ ಸಂಚಾರಿ ಪೊಲೀಸರು 23 ಮಂದಿ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಶಾಲಾ ವಾಹನ ಚಾಲಕರ ವಿರುದ್ಧ ಕೆಲ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಸುಮಾರು 3,016 ವಾಹನಗಳನ್ನು ತಪಾಸಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವೇಳೆ ಪಾನಮತ್ತರಾಗಿ ಶಾಲಾ ವಾಹನ ಚಲಾಯಿಸುತ್ತಿದ್ದ ಚಾಲಕರ ಚಾಲನಾ ಪರವಾನಗಿಯನ್ನು ಅಮಾನತ್ತುಗೊಳಿಸುವಂತೆ ಸಂಬಂಧಪಟ್ಟ ಆರ್.ಟಿ.ಓ ಕಚೇರಿಗಳಿಗೆ ವರದಿ ನೀಡಲಾಗಿದೆ. ಕಾರ್ಯಾಚರಣೆಯ ವೇಳೆ ಚಾಲನಾ ಕ್ಷಮತೆಯಿರದ 11 ವಾಹನಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದು ಸಂಬಂಧಪಟ್ಟ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News