ಬೆಂಗಳೂರು ನಗರದಲ್ಲಿ 10 ಸಾವಿರ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ : ಪೊಲೀಸ್ ಆಯುಕ್ತ ಬಿ. ದಯಾನಂದ್

Update: 2024-02-24 15:05 GMT

ಬೆಂಗಳೂರು : ಸುರಕ್ಷಿತ ನಗರ (ಸೇಫ್ ಸಿಟಿ) ಯೋಜನೆಯಡಿ ಬೆಂಗಳೂರು ನಗರದಾದ್ಯಂತ 10 ಸಾವಿರ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಶನಿವಾರ ನಗರದ ವೈಟ್‍ಫೀಲ್ಡ್ ವಿಭಾಗದ ಇಪಿಐಸಿ ಪ್ರದೇಶದ ಎಸ್‍ಎಪಿ ಲ್ಯಾಬ್‍ನಲ್ಲಿ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಾಗಲೇ ನಗರದಲ್ಲಿ ನಿರ್ಭಯ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳು 667 ಕೋಟಿ ರೂ. ವೆಚ್ಚದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುತ್ತಿದ್ದು, ಈಗಾಗಲೇ 7500 ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನು ನಾವು ಕಮಾಂಡ್ ಸೆಂಟರ್ ನಲ್ಲಿ ಪರಿಶೀಲಿಸುತ್ತಿದ್ದೇವೆ ಎಂದರು.

ಸೇಫ್ ಸಿಟಿ ನಿಯಮದಡಿ ನಗರದ ವ್ಯಾಪಾರಿ ಮಳಿಗೆಗಳಲ್ಲೂ ಸಿಸಿಟಿವಿ ಕ್ಯಾಮರಾ ಅಳವಡಿಸುವುದು ಕಡ್ಡಾಯವಾಗಿದೆ ಎಂದು ಬಿ.ದಯಾನಂದ್ ಹೇಳಿದರು.

ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ಮಹದೇವಪುರ, ಕೆ.ಆರ್.ಪುರಂ, ಬೆಳ್ಳಂದೂರು, ವರ್ತೂರು ಪ್ರದೇಶಗಳ ಸಂಚಾರ ದಟ್ಟಣೆ ಸಮಸ್ಯೆಗಳ ಕುರಿತು ಪ್ರಶ್ನೆಗಳನ್ನು ಕೇಳಿದ್ದು, ಈ ಭಾಗಗಳು ಐಟಿ ಕಂಪೆನಿ ಹೊಂದಿರುವ ಪ್ರದೇಶವಾಗಿದ್ದು, ಹೆಚ್ಚು ಖಾಸಗಿ ಕ್ಯಾಬ್‍ಗಳನ್ನು ರಸ್ತೆಯಲ್ಲೇ ಪಾರ್ಕಿಂಗ್  ಮಾಡಿರುತ್ತಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News