ಹಿರಿಯ ಪೊಲೀಸ್ ಅಧೀಕ್ಷಕರಾಗಿ ಅಬ್ದುಲ್ ಅಹದ್‌ಗೆ ಭಡ್ತಿ
Update: 2024-12-31 15:55 GMT
ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ, ಬಿಎಂಟಿಸಿ ಸುರಕ್ಷತೆ ಹಾಗೂ ಜಾಗೃತ ವಿಭಾಗದ ನಿರ್ದೇಶಕ ಅಬ್ದುಲ್ ಅಹದ್ ಅವರಿಗೆ ಹಿರಿಯ ಪೊಲೀಸ್ ಅಧೀಕ್ಷಕರಾಗಿ ( ಎಸ್‌ಎಸ್‌ಪಿ ) ಭಡ್ತಿ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಅವರು ಈ ಹಿಂದೆ, ಬೆಂಗಳೂರು ಸಿಸಿಬಿ ಡಿಸಿಪಿ ಯಾಗಿ, ಕರಾವಳಿ ಕಾವಲು ಪಡೆಯ ಎಸ್ಪಿಯಾಗಿ, ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿ, ಭ್ರಷ್ಟಾಚಾರ ನಿಗ್ರಹ ದಳ, ಎಸಿಬಿಯ ಬೆಂಗಳೂರು ಎಸ್ಪಿಯಾಗಿ, ಸಿಐಡಿಯಲ್ಲಿ ಆರ್ಥಿಕ ಅಪರಾಧಗಳ ವಿಭಾಗದ ಎಸ್ಪಿಯಾಗಿ ಹಾಗೂ ಕೆಎಸ್‌ಆರ್‌ಪಿಯಲ್ಲಿ ಕಮಾಂಡೆಂಟ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.