ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ | ಪ್ರಕರಣ​ ದಾಖಲಿಸಿಕೊಂಡ ಸಿಬಿಐ

Update: 2024-06-05 08:07 GMT

CBI | PC : PTI 

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ.ಮಹೇಶ್ ಎಂಬುವರ ದೂರಿನ ಮೇರೆಗೆ ಐವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದ್ದು, ಬ್ಯಾಂಕ್​ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ, ಈ ಸಂಬಂಧ ಸಚಿವ ಬಿ.ನಾಗೇಂದ್ರ ಅವರಿಗೂ ಕೂಡ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ‌ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಎಸ್ಐಟಿ ಈ ಪ್ರಕರಣದ ವರ್ಗಾವಣೆಗೆ ನಿರಾಕರಿಸಿದರೆ  ಸಿಬಿಐ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಯೂನಿಯನ್‌ ಬ್ಯಾಂಕ್‌ನಲ್ಲಿರುವ ವಾಲ್ಮೀಕಿ ಅಭಿವೃದ್ದಿ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ಈ ಅಕ್ರಮವನ್ನು ಬೆನ್ನತ್ತಿದಾಗ ಫೈನಾನ್ಸ್‌ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಮಾಡಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News