ರಾತ್ರೋರಾತ್ರಿ ಕಾವೇರಿ ನೀರು ಡಿಕೆಶಿ ತಮಿಳುನಾಡು ಸರಕಾರದ ಆಜ್ಞೆ ಪಾಲಿಸುತ್ತಿದ್ದಾರೆಯೇ?: ಜೆಡಿಎಸ್
Update: 2025-03-25 18:20 IST

ಡಿ.ಕೆ.ಶಿವಕುಮಾರ್
ಬೆಂಗಳೂರು : ‘ನಾಡದ್ರೋಹಿ ಕಾಂಗ್ರೆಸ್ ಸರಕಾರ ಮತ್ತೆ ತಮಿಳುನಾಡಿಗೆ ರಾತ್ರೋರಾತ್ರಿ ಕಾವೇರಿ ನೀರು ಹರಿಸಿ ಮಂಡ್ಯದ ರೈತರ ಹೊಟ್ಟೆ ಮೇಲೆ ಹೊಡೆದಿದೆ’ ಎಂದು ಜೆಡಿಎಸ್ ಇಂದಿಲ್ಲಿ ದೂರಿದೆ.
ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್, ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಮಿಳುನಾಡು ಸರಕಾರದ ಆಜ್ಞೆ ಪಾಲಿಸುತ್ತಿದ್ದಾರೆಯೇ?’ ಎಂದು ಖಾರವಾಗಿ ಪ್ರಶ್ನಿಸಿದೆ.
ರಾಜ್ಯದ ಜನ ಹನಿ ಹನಿ ನೀರಿಗೆ ಹಾಹಾಕಾರ ಪಡುತ್ತಿದ್ದಾರೆ. ಆದರೆ, ‘ಗುಲಾಮಿ ಕಾಂಗ್ರೆಸ್’ ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದೆ. ‘ಮಂಡ್ಯದವರು ಛತ್ರಿಗಳು’ ಎಂದು ಅವಮಾನ ಮಾಡಿದ್ದ ಡಿಕೆಶಿ, ‘ಇಂಡಿಯಾ’ ಮೈತ್ರಿಕೂಟದ ಸ್ಟಾಲಿನ್ ಸರಕಾರ ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಡುತ್ತಿರುವುದು ನಾಚಿಕೆಗೇಡು ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.