ಲೋಕಾಯುಕ್ತ ಎಡಿಜಿಪಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು
Update: 2024-09-30 16:42 GMT
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದಲ್ಲಿ ಸೋಮವಾರ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ದೂರು ನೀಡಲಾಯಿತು.
ಜೆಡಿಎಸ್ ನಿಯೋಗದಲ್ಲಿ ಶಾಸಕಾಂಗ ಪಕ್ಷದ ಉಪನಾಯಕಿ ಶಾರದಪೂರ್ಯನಾಯಕ್, ಶಾಸಕರಾದ ಕರೆಮ್ಮ ಜಿ.ನಾಯಕ್, ನೇಮಿರಾಜ್ ನಾಯಕ್, ಎಚ್.ಟಿ.ಮಂಜು, ಎ.ಮಂಜು, ವೆಂಕಟಶಿವಾರೆಡ್ಡಿ, ಬಿ.ಎನ್.ರವಿಕುಮಾರ್, ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಟಿ.ಎ.ಶರವಣ, ಕೆ.ಎ. ತಿಪ್ಪೇಸ್ವಾಮಿ, ಸಿ.ಎನ್.ಮಂಜೇಗೌಡ, ಗೋವಿಂದರಾಜು, ಬಿ.ಎಂ.ಫಾರೂಖ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.