ಝಮೀರ್ ಅಹ್ಮದ್ ರಾಜೀನಾಮೆಗೆ ಜೆಡಿಎಸ್ ಆಗ್ರಹ

Update: 2024-11-13 16:35 GMT

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಭ್ಯ ಭಾಷೆ ಬಳಸಿರುವ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಜೆಡಿಎಸ್ ಆಗ್ರಹಿಸಿದೆ.

ಬುಧವಾರ ಫ್ರೀಡಂ ಪಾರ್ಕ್ ಮೈದಾನದಲ್ಲಿ ಜಮಾಯಿಸಿದ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು, ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಪ್ರಚಾರದ ಭಾಷಣದಲ್ಲಿ ಅವಹೇಳನಕಾರಿ ಹಾಗೂ ಅಸಭ್ಯ ಭಾಷೆ ಬಳಸಿದ ಝಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಆಗಬೇಕೆಂದು ಒತ್ತಾಯಿಸಿದರು.

ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಝಮೀರ್ ಅವರು ಆಡಿರುವ ಮಾತು ಅದು ಇಡೀ ಜನಾಂಗಕ್ಕೆ, ರಾಜ್ಯದ ಜನರಿಗೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಶೋಭೆ ತರುವುದಿಲ್ಲ. ಸಭ್ಯತೆಯ ಎಲ್ಲೆ ಮೀರಿ ಮಾತನಾಡುವ ವ್ಯಕ್ತಿ ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದರು.

ಝಮೀರ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದ ಬಗ್ಗೆಯೂ ಲಘುವಾಗಿ ಮಾತನಾಡಿದ್ದಾರೆ. ರಾಜಕೀಯವಾಗಿ ಯಾರಿಗೂ ನೋವಾಗದಂತೆ ಟೀಕೆ-ಟಿಪ್ಪಣಿ ಮಾಡಲು ಅಭ್ಯಂತರವಿಲ್ಲ. ಆದರೆ, ವ್ಯಕ್ತಿಗತ, ಸಮಾಜದ ಹಿತಕ್ಕೆ ಧಕ್ಕೆಯಾಗುವಂತೆ ವರ್ಣದ ಬಗ್ಗೆ ನಿಂದನೆ ಅವರ ಘನತೆಗೆ ತಕ್ಕದಾಗಿರಲಿಲ್ಲ. ತಮ್ಮ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ಮತ್ತೆ ಸಮರ್ಥನೆ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ಬೆಂಗಳೂರು ಅಧ್ಯಕ್ಷ ರಮೇಶ್ ಗೌಡ ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News