ರಾಜ್ಯದಲ್ಲಿ ಹೆಚ್ಚಿದ ತಾಪಮಾನ: ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಖಲು
Update: 2025-03-27 21:50 IST

ಸಾಂದರ್ಭಿಕ ಚಿತ್ರ | PTI
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಗುರುವಾರದಂದು ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್, ಕಾರವಾದಲ್ಲಿ 35, ಮಂಗಳೂರಿನಲ್ಲಿ 34, ಬೆಳಗಾವಿಯಲ್ಲಿ 35, ಬೀದರ್‌ನಲ್ಲಿ 36, ಬಾಗಲಕೋಟೆ 38, ಕೊಪ್ಪಳ 38, ರಾಯಚೂರು 37, ಚಿತ್ರದುರ್ಗ 36, ಮೈಸೂರು 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.