ಡಿಸೆಂಬರ್ ತಿಂಗಳಲ್ಲಿ ಪಿಲಿಕುಳದಲ್ಲಿ ಕಂಬಳ ಆಯೋಜಿಸುವುದಿಲ್ಲ ; ಹೈಕೋರ್ಟ್‌ಗೆ ಸರಕಾರದ ಮಾಹಿತಿ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಿಸರ್ಗಧಾಮ ಪಿಲಿಕುಳದಲ್ಲಿ ಡಿಸೆಂಬರ್ ತಿಂಗಳಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡುವುದಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನಡೆಯಲಿರುವ ಕಂಬಳ ಸ್ಪರ್ಧೆಯನ್ನು ಪ್ರಾಣಿ ಸಂಗ್ರಹಾಲಯದ ಬಳಿ ನಡೆಸಲಾಗುತ್ತಿದೆ. ಇದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಆಕ್ಷೇಪಿಸಿ ಪ್ರಾಣಿ ದಯಾ ಸಂಘಟನೆಯಾದ ಪೆಟಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗಿ ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆಯ ವೇಳೆ ಸರಕಾರದ ವಕೀಲೆ ನಿಲೋಫರ್ ಅಕ್ಟರ್ ಹಾಜರಾಗಿ ಕಂಬಳ ಆಯೋಜಿಸುವುದರಿಂದ ನಿಸರ್ಗಧಾಮದಲ್ಲಿನ ಪ್ರಾಣಿ ಸಂಕುಲಕ್ಕೆ ಸಮಸ್ಯೆಯಾಗಲಿದೆಯೇ ಎಂಬುದನ್ನು ಅರಿಯಲು ತಜ್ಞರ ಸಮಿತಿ ರಚಿಸಲಾಗಿ ದೆ. ಸಮಿತಿಯು ವರದಿ ನೀಡಿಲ್ಲ. ಹೀಗಾಗಿ, ಡಿಸೆಂಬರ್‌ನಲ್ಲಿ ಪಿಲಿಕುಳದಲ್ಲಿ ಸ್ಪರ್ಧೆ ಆಯೋಜಿಸುವುದಿಲ್ಲ ಎಂದರು. ಇದನ್ನು ದಾಖಲಿಸಿಕೊಂಡ ನ್ಯಾಯಾಲಯವು ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿದೆ.