ಕನ್ನಡ ರಾಜ್ಯೋತ್ಸವ | ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರ ನೇಮಕ
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ತುಮಕೂರು-ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗದಗ-ಕಾನೂನು ಸಚಿವ ಎಚ್.ಕೆ.ಪಾಟೀಲ್, ಬೆಂಗಳೂರು ಗ್ರಾಮಾಂತರ-ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ರಾಮನಗರ-ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಜಯಪುರ-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಚಿಕ್ಕಮಗಳೂರು-ಇಂಧನ ಸಚಿವ ಕೆ.ಜೆ.ಜಾರ್ಜ್.
ದಕ್ಷಿಣ ಕನ್ನಡ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮೈಸೂರು-ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಬೆಳಗಾವಿ-ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬಳ್ಳಾರಿ-ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಲಬುರಗಿ-ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಹಾವೇರಿ-ಜವಳಿ ಸಚಿವ ಶಿವಾನಂದ ಪಾಟೀಲ್.
ವಿಜಯನಗರ-ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಯಾದಗಿರಿ-ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ, ಬೀದರ್-ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮಂಡ್ಯ-ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ದಾವಣಗೆರೆ-ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಧಾರವಾಡ-ಕಾರ್ಮಿಕ ಸಚಿವ ಸಂತೋಷ್ ಲಾಡ್.
ರಾಯಚೂರು-ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಬಾಗಲಕೋಟೆ-ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ಚಾಮರಾಜನಗರ-ರೇಷ್ಮೆ ಸಚಿವ ಕೆ.ವೆಂಕಟೇಶ್, ಕೊಪ್ಪಳ-ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಚಿತ್ರದುರ್ಗ-ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್, ಹಾಸನ-ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕೋಲಾರ-ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್.
ಉಡುಪಿ-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉತ್ತರ ಕನ್ನಡ-ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಿವಮೊಗ್ಗ-ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಿಕ್ಕಬಳ್ಳಾಪುರ-ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಕೊಡಗು-ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರನ್ನು ನೇಮಕ ಮಾಡಲಾಗಿದೆ.
ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಸಚಿವರು ಧಜ್ವಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಥಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.