ಕರ್ನಾಟಕ ಉಪಚುನಾವಣೆ ಫಲಿತಾಂಶ | ಖರ್ಗೆ, ರಾಹುಲ್ ನಾಯಕತ್ವಕ್ಕೆ ಸಂದ ಜಯ : ಸುರ್ಜೇವಾಲಾ

Update: 2024-11-23 20:19 IST
ಕರ್ನಾಟಕ ಉಪಚುನಾವಣೆ ಫಲಿತಾಂಶ | ಖರ್ಗೆ, ರಾಹುಲ್ ನಾಯಕತ್ವಕ್ಕೆ ಸಂದ ಜಯ : ಸುರ್ಜೇವಾಲಾ

ರಣದೀಪ್ ಸಿಂಗ್ ಸುರ್ಜೆವಾಲಾ | Photo: PTI

https://www.varthabharati.in/state/surjewala-2011165

  • whatsapp icon

ಬೆಂಗಳೂರು : ಕರ್ನಾಟಕದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನಾಯಕತ್ವಕ್ಕೆ ಸಂದ ಜಯ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸಂತಸ ವ್ಯಕ್ತಪಡಿಸಿದ್ದಾರೆ.

ಶನಿವಾರ ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇದು ಕಾಂಗ್ರೆಸ್ ಕಾರ್ಯಕರ್ತರ ಗೆಲುವು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಾಯಕತ್ವ, ನಮ್ಮ ಗ್ಯಾರಂಟಿಗಳು ಹಾಗೂ ಕಾಂಗ್ರೆಸ್ ಸರಕಾರದ ನೀತಿಗಳ ಫಲ ಇದಾಗಿದೆ ಎಂದಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಿ.ಪಿ.ಯೋಗೇಶ್ವರ್, ಜೆಡಿಎಸ್-ಬಿಜೆಪಿಯ ನಿಖಿಲ್ ಕುಮಾರಸ್ವಾಮಿ ಸೋಲಿಸಿದ್ದು, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ನ ಅನ್ನಪೂರ್ಣ ಅವರು ಬಿಜೆಪಿಯ ಬಿ.ಹನುಮಂತಪ್ಪ ಅವರನ್ನು ಸೋಲಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು ಕಾಂಗ್ರೆಸ್ನ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸೋಲಿಸಿ ಗೆಲುವು ಸಾಧಿಸಿದ್ದಾರೆ ಎಂದು ಸುರ್ಜೇವಾಲ ಉಲ್ಲೇಖಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News