ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು
Update: 2025-04-06 21:19 IST

ಬೆಂಗಳೂರು : ಬೆಳ್ತಂಗಡಿ ತಾಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು, ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಿವಾರ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು.
ಮಕ್ಕಳನ್ನು ಶ್ಲಾಘಿಸಿದ ಮುಖ್ಯಮಂತ್ರಿ, ಶಾಲೆಗೆ ಎರಡು ಕಂಪ್ಯೂಟರ್ ಗಳನ್ಮು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ, ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಬೆಳ್ತಂಗಡಿಯ ಕಾಂಗ್ರೆಸ್ ಯುವ ನಾಯಕ ರಕ್ಷಿತ್ ಶಿವರಾಮ್ ಉಪಸ್ಥಿತರಿದ್ದರು.