ಸಿಎಂ, ಡಿಸಿಎಂರನ್ನು ಭೇಟಿಯಾಗಿ ಚರ್ಚಿಸಿದ KRPP ಶಾಸಕ ಗಾಲಿ ಜನಾರ್ದನ ರೆಡ್ಡಿ

Update: 2024-02-26 17:41 GMT

ಬೆಂಗಳೂರು : ರಾಜ್ಯಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೆ ಗಂಗಾವತಿ ಕ್ಷೇತ್ರದ ಪಕ್ಷೇತರ ಶಾಸಕ ಜನಾರ್ದನ ರೆಡ್ಡಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರೂ ಆಗಿರುವ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿಜೆಪಿ ಸೇರ್ಪಡೆಯಾಗಲಿದ್ದಾರೆಂಬ ಮಾತುಗಳ ಬೆನ್ನಲ್ಲೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿ ಮಾಡಿ, ಕೆಲ ಹೊತ್ತು ಸಮಾಲೋಚನೆ ನಡೆಸಿದ್ದಾರೆ.

ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಐದನೆ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. ಗೆಲುವಿಗೆ ಒಟ್ಟಾರೆ 45 ಮತಗಳ ಅಗತ್ಯವಿದ್ದು, ಜೆಡಿಎಸ್‍ನ 19 ಹಾಗೂ ಬಿಜೆಪಿಯ ಹೆಚ್ಚುವರಿ 21ಮತಗಳು ಸೇರಿ 40 ಮತಗಳಾಗಲಿದ್ದು, ಅವರ ಗೆಲುವಿಗೆ ಇನ್ನೂ 5 ಮತಗಳ ಅಗತ್ಯವಿದೆ.

ಇನ್ನೂ ತೀರ್ಮಾನಿಸಿಲ್ಲ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷದವರು ನನಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲ ಪಕ್ಷದವರು ತಮ್ಮ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವಂತೆ ಕೋರಿದ್ದಾರೆ. ಆದರೆ, ಯಾರನ್ನು ಬೆಂಬಲಿಸಬೇಕೆಂದು ಇನ್ನೂ ಏನೂ ತೀರ್ಮಾನಿಸಿಲ್ಲ’ ಎಂದು ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News