ಕೆಸೆಟ್-2024 | ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ತಾತ್ಕಾಲಿಕ ಫಲಿತಾಂಶ ಪ್ರಕಟ

Update: 2025-01-05 14:32 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 ವಿಷಯಗಳಿಗೆ ನ.24ರಂದು ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆಯಲ್ಲಿ ಒಟ್ಟು 6,302 ಮಂದಿ ಅರ್ಹತೆ ಪಡೆದಿದ್ದು, ಅಷ್ಟೂ ಮಂದಿಯ ನೋಂದಣಿ ಸಂಖ್ಯೆಗಳನ್ನು ಕೆಇಎ ವೆಬ್ ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಕೆ-ಸೆಟ್ ಪರೀಕ್ಷೆಗೆ ಒಟ್ಟು 1,06,433 ಮಂದಿ ನೋಂದಾಯಿಸಿಕೊಂಡು, 89,416 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,302 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಪುರಷರು 3,275 ಹಾಗೂ ಮಹಿಳೆಯರು 3,020 ಹಾಗೂ ತೃತೀಯ ಲಿಂಗಿಗಳು 7 ಮಂದಿ ಇದ್ದಾರೆ. ವಿಶೇಷ ಸಾಮರ್ಥ್ಯವುಳ್ಳ 293 ಮಂದಿ ಈ ಪಟ್ಟಿಯಲ್ಲಿ ಸೇರಿದ್ದಾರೆ.

ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಸಂಖ್ಯೆಯು ಎರಡೂ ಪತ್ರಿಕೆಗಳಿಗೆ ಹಾಜರಾದ ಒಟ್ಟು ಅಭ್ಯರ್ಥಿಗಳ ಶೇ.6ರಷ್ಟಿದೆ. ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News