ಚನ್ನಪಟ್ಟಣ ಫಲತಾಂಶವನ್ನು ಒಪ್ಪಿಕೊಳ್ಳಲೇಬೇಕು : ಕೇಂದ್ರ ಸಚಿವ ಕುಮಾರಸ್ವಾಮಿ

Update: 2024-11-24 16:54 GMT

ಬೆಂಗಳೂರು: ‘ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಂದಿದೆ. ಇದೀಗ ಆ ಕುರಿತು ಚರ್ಚಿಸಿದರೆ ಯಾವುದೇ ಪ್ರಯೋಜನವಿಲ್ಲ. ಈ ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲೇಬೇಕಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 25,413 ಮತಗಳ ಅಂತರದಿಂದ ಸೋತಿದ್ದು, ಇದು ಅವರಿಗೆ ಇದು ಸತತ ಮೂರನೆಯ ಬಾರಿಯೂ ಸೋಲಾಗಿದೆ ಎಂದು ವಿಶ್ಲೇಷಿಸಿದರು.

2019ರ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ವಿರುದ್ಧ ಮೊದಲ ಬಾರಿಗೆ ನಿಖಿಲ್ ಸೋಲು ಕಂಡಿದ್ದರು. ಆ ಬಳಿಕ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಎರಡನೆ ಬಾರಿ, ಇದೀಗ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿಯೂ ಸೋಲನ್ನು ಅನುಭವಿಸಿದ್ದಾರೆ. ಮಿಕ್ಕ ವಿಚಾರಗಳನ್ನು ನಂತರ ಮಾತನಾಡುತ್ತೇನೆಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News