ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಹಾಕಿದ್ದ ಆರೋಪ | ಕುಮಾರಸ್ವಾಮಿಗೆ ನೀಡಿದ್ದ ಮಧ್ಯಂತರ ಆದೇಶ ಮಾರ್ಪಾಡು
Update: 2025-03-28 23:34 IST
ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ಬೆದರಿಕೆ ಹಾಕಿದ್ದ ಆರೋಪದ ಮೇಲೆ ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ್ದ ಎಫ್‌ಐಆರ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ಮಾರ್ಪಾಡು ಮಾಡಿ ಹೈಕೋರ್ಟ್ ಆದೇಶಿದೆ.
ಅಲ್ಲದೆ ಎಡಿಜಿಪಿಗೆ ಬೆದರಿಕೆ ಎಫ್‌ಐಆರ್‌ಗೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿರುವ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲವೆಂದು ಆದೇಶಿದೆ.
ಆದರೆ 2014ರ ಸಾಯಿ ವೆಂಕಟೇಶ್ವರ ಅಕ್ರಮ ಗಣಿಗಾರಿಕೆ ಕೇಸ್ಗೆ ಈ ರಿಲೀಫ್ ಅನ್ವಯಿಸುವುದಿಲ್ಲ. ಸಾಯಿ ವೆಂಕಟೇಶ್ವರ ಅಕ್ರಮ ಗಣಿಗಾರಿಕೆ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದು ಕೋರಿಕೆಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಮುಂದುವರಿಯಲಿದೆ ಎಂದು ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿದೆ.