ಕುಂಭಮೇಳದಲ್ಲಿ ಕಾಲ್ತುಳಿತ : ಮೃತರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ

Update: 2025-01-29 13:57 IST
Photo of CM Siddaramaiah

ಸಿದ್ದರಾಮಯ್ಯ 

  • whatsapp icon

ಬೆಂಗಳೂರು : ಪ್ರಯಾಗ್ರಾಜ್‌ನ ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಗಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸುಮಾರು 50 ಜನ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕೆಲವರು ಮೃತಪಟ್ಟಿರುವ ಶಂಕೆಯೂ ವ್ಯಕ್ತವಾಗಿದೆ. ಇದೀಗ ಕರ್ನಾಟಕದ ಕೆಲವು ಮಂದಿ ಘಟನೆಯಲ್ಲಿ ಗಾಯಗೊಂಡಿರುವುದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News