ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡನೀಯ : ಜೆಡಿಎಸ್

Update: 2024-12-11 13:27 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದು ಖಂಡನೀಯವಾಗಿದ್ದು, ರಾಜ್ಯ ಸರಕಾರದ ಈ ನಡೆ ಹೇಡಿತನದ ಕೃತ್ಯ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಬುಧವಾರ ಈ ಸಂಬಂಧ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುತ್ತಿರುವ ಕಾಂಗ್ರೆಸ್ ಸರಕಾರ, ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಆದನ್ನು ಬಿಟ್ಟು ಸರ್ವಾಧಿಕಾರಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಪಂಚಮಸಾಲಿಗಳ ಮೇಲೆ ಲಾಠಿ ಪ್ರಯೋಗಿಸಿ ದಮನಕಾರಿ ನೀತಿ ಅನುಸರಿಸಿದೆ ಎಂದು ಆರೋಪಿಸಿದೆ.

ಸುವರ್ಣ ವಿಧಾನಸೌಧದ ಎದುರು 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಸರ್ಕಾರ, ಪೊಲೀಸರನ್ನು ಬಳಸಿ ಬಲ ಪ್ರಯೋಗ ಮಾಡಿರುವುದು ನಾಚಿಕೆಗೇಡು ಎಂದಿದೆ.

ಪ್ರತಿಭಟನಾಕಾರರನ್ನು ಬೆನ್ನಟ್ಟಿ ರಕ್ತ ಬರುವಂತೆ ಪೊಲೀಸರು ಲಾಠಿಯಿಂದ ಹೊಡೆದಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಕೆಟ್ಟ ಆಡಳಿತಕ್ಕೆ ಸಾಕ್ಷಿ. ಕಾಂಗ್ರೆಸ್ ಸರಕಾರದ ಲಾಠಿ ಏಟಿನ ದೌರ್ಜನ್ಯ ಮತ್ತು ದಬ್ಬಾಳಿಕೆಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News