ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ : ಡಿವೈಎಸ್ಪಿಗೆ ಸಿಸಿಬಿ ನೋಟಿಸ್

Update: 2024-11-28 18:06 GMT
ಸಾಂದರ್ಭಿಕ ಚಿತ್ರ

ಬೆಂಗಳೂರು : ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಸಂಬಂಧ ವಿಚಾರಣೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಡಿವೈಎಸ್ಪಿ ಕನಕಾಲಕ್ಷ್ಮೀ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಲು ಮುಂದಾಗಿದೆ.

ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಆತ್ಮಹತ್ಯೆ ಸ್ಥಳದಲ್ಲಿ ದೊರೆತ ಡೆತ್‍ನೋಟ್‍ನಲ್ಲಿ ಬರೆದಿರುವ ಆರೋಪಿಯನ್ನು ಇದುವರೆಗೆ ಏಕೆ ವಿಚಾರಣೆ ನಡೆಸಿಲ್ಲ. ಅವರ ಮೇಲೆ ಏಕೆ ಕ್ರಮಕೈಗೊಂಡಿಲ್ಲ, ಇನ್ನೂ ಏಕೆ ತನಿಖೆ ಆರಂಭಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದೆ. ಹಾಗಾಗಿ ಇದೀಗ ಸಿಸಿಬಿ ಪೊಲೀಸರು ಡಿವೈಎಸ್ಪಿ ಕನಕಾಲಕ್ಷ್ಮೀ ಅವರಿಗೆ ವಿಚಾರಣೆಗಾಗಿ ನೋಟಿಸ್ ನೀಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.

ಮತ್ತೊಂದೆಡೆ, ಭೋವಿ ನಿಗಮದಲ್ಲಿನ ಅಕ್ರಮ ಆರೋಪ ಸಂಬಂಧ ತನಿಖೆಯ ಭಾಗವಾಗಿ ಜೀವಾ ಅವರನ್ನು ವಿಚಾರಣೆಗೆ ಕರೆಯಲು ಕಾರಣವೇನು? ಜೀವಾ ಅವರಿಗೆ ಸಂಬಂಧಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆಯೇ, ವಿಚಾರಣೆಗಾಗಿ ಅವರು ಎಷ್ಟು ಬಾರಿ ಸಿಐಡಿ ಕಚೇರಿಗೆ ಬಂದಿದ್ದಾರೆ? ಎಂಬಿತ್ಯಾದಿ ಮಾಹಿತಿಗಳನ್ನು ಸಿಸಿಬಿ ಪಲೀಸರು ಸಂಗ್ರಹಿಸುತ್ತಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News