ಲೋಕಸಭಾ ಚುನಾವಣೆ : 1.07 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ

Update: 2024-04-02 16:43 GMT

Photo :.wikipedia

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ರಾಮಮೂರ್ತಿ ನಗರ ಪೊಲೀಸ್ ಠಾಣೆ ತಂಡದವರು 22 ಲಕ್ಷ ರೂ.ಮೌಲ್ಯದ 0.215ಕೆಜಿ ಡ್ರಗ್ಸ್(ಎಂ.ಡಿ.ಎಂ.ಎ) ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ದೇವನಹಳ್ಳಿ ಪೊಲೀಸ್ ಠಾಣೆ ತಂಡದವರು 85 ಲಕ್ಷ ರೂ.ಮೌಲ್ಯದ 0.850ಕೆಜಿ ಡ್ರಗ್ಸ್(ಕೊಕೇನ್) ವಶಪಡಿಸಿಕೊಂಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆಯವರು 2.02 ಕೋಟಿ ರೂ.ನಗದು ಮತ್ತು 25.29 ಲಕ್ಷ ರೂ.ಮೌಲ್ಯದ 637.450 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 1167 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ.

ಅಬಕಾರಿ ಇಲಾಖೆಯು ಘೋರ ಅಪರಾಧ ಅಡಿಯಲ್ಲಿ 1154 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 1126 ಪ್ರಕರಣ ದಾಖಲಿಸಿದೆ. ಎನ್‍ಡಿಪಿಎಸ್ ಅಡಿಯಲ್ಲಿ 75 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ 4988 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 665 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News