ಲೋಕಸಭಾ ಚುನಾವಣೆ | ಬೆಂಗಳೂರಿನಲ್ಲಿ ಎ.24ರ ಮಧ್ಯರಾತ್ರಿಯಿಂದಲೇ ಮದ್ಯ ಮಾರಾಟ ಸಂಪೂರ್ಣ ನಿಷೇಧ

Update: 2024-04-16 12:35 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎ.26ರ ಮತದಾನದ ದಿನ ಹಾಗೂ ಜೂನ್ 4ರ ಮತ ಎಣಿಕೆ ದಿನ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮತದಾನ ಪ್ರಯುಕ್ತ ಎಲ್ಲ ರೀತಿಯ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಎ.24ರ ಮಧ್ಯರಾತ್ರಿ 12 ಗಂಟೆಯಿಂದ 26 ಮಧ್ಯರಾತ್ರಿ 12ರ ವರೆಗೆ ಮತ್ತು ಮತ ಎಣಿಕೆ ಪ್ರಯುಕ್ತ ಜೂ.3ರ ಮಧ್ಯರಾತ್ರಿ 12ರಿಂದ ಜೂ.4ರ ಮಧ್ಯರಾತ್ರಿ 12ರ ವರೆಗೆ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಈ ವೇಳೆ ಮದ್ಯ ಮಾರಾಟ ಸಂಪೂರ್ಣ ನಿಷೇಧ ಮತ್ತು ಧ್ವನಿ ವರ್ಧಕಗಳ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗುವುದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶದಲ್ಲಿ ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News