ಲಂಚಕ್ಕೆ ಬೇಡಿಕೆ; ಡಿವೈಎಸ್ಪಿ ಲೋಕಾಯುಕ್ತ ಬಲೆಗೆ
Update: 2025-03-25 23:53 IST

ಶಿವಮೊಗ್ಗ : ಭದ್ರಾವತಿ ತಾಲೂಕು ಕಚೇರಿಯ ಖಜಾನೆಯಲ್ಲಿಯೇ ಸೇವೆ ಮುಂದುವರಿಸಲು ಅವಕಾಶ ನೀಡುವಂತೆ ಕೋರಿದ್ದ ಸಹೋದ್ಯೋಗಿಯಿಂದ ಲಂಚ ಸ್ವೀಕರಿಸುವಾಗ ಪೊಲೀಸ್ ಇಲಾಖೆಯ ಡಿವೈಎಸ್ಪಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದಲ್ಲಿ ಮಂಗಳವಾರ ವರದಿಯಾಗಿದೆ.
ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ಅವರು 5,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಿಬ್ಬಂದಿಯು ಲಂಚ ನೀಡಲು ಇಷ್ಟವಿಲ್ಲದಿದ್ದರಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರೆನ್ನಲಾಗಿದೆ. ನಿಗದಿಯಂತೆ ಡಿವೈಎಸ್ಪಿ ಕೃಷ್ಣಮೂರ್ತಿ ಅವರು ಪೊಲೀಸ್ ವಸತಿ ಗೃಹದಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.