ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆಯಾಗಿದ್ದಾರೆ.
2024 -25ರ ಸಾಲಿನ ಚುನಾವಣೆ ಕೆ.ಎಫ್ .ಸಿ .ಸಿ. ಕಚೇರಿಯ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣಾ ಅಧಿಕಾರಿಯ ನೇತೃತ್ವದಲ್ಲಿ ಇಲೆಕ್ಟ್ರಾನಿಕ್ ಮತ ಯಂತ್ರಗಳ ಮೂಲಕ ನಡೆಯಿತು. ನಿರ್ಮಾಪಕ , ವಿತರಕ ಹಾಗೂ ಪ್ರದರ್ಶಕ ವಲಯಗಳಿಂದ ಒಟ್ಟು 128 ಆಕಾಂಕ್ಷಿಗಳು ಸ್ಪರ್ಧೆಯ ಕಣದಲ್ಲಿದ್ದು, ಇದರಲ್ಲಿ ಈಗಾಗಲೇ 24 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಾರಿ ಪ್ರದರ್ಶಕ ವಲಯದಲ್ಲಿ ಅಧ್ಯಕ್ಷ ಸ್ಥಾನ ಮೀಸಲಾಗಿದ್ದು, ವಜೇಶ್ವರಿ ಚಿತ್ರಮಂದಿರದ ಮಾಲಕ ಸುಂದರ್ ರಾಜ್ ಆರ್ ವಿರುದ್ಧ ವೈಭವಿ ಚಿತ್ರಮಂದಿರದ ಮಾಲಕ ನರಸಿಂಹಲು ಎಂ. ಸ್ಪರ್ಧಿಸಿದ್ದರು. ನರಸಿಂಹಲು ಉತ್ತಮ ಅಂತರದಿಂದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಉಳಿದ ಪದಾಧಿಕಾರಿಗಳ ವಿವರ ಇಂತಿವೆ.
2. ನಿರ್ಮಾಪಕ ವಲಯದ ಉಪಾಧ್ಯಕ್ಷರಾಗಿ ವೆಂಕಟೇಶ್ ಕೆ.ವಿ .(ಸಫೇರ್)
3. ವಿತರಕ ವಲಯದ ಉಪಾಧ್ಯಕ್ಷರಾಗಿ ಶಿಲ್ಪಾ ಶ್ರೀನಿವಾಸ್
4. ಪ್ರದರ್ಶಕರ ವಲಯದ ಉಪಾಧ್ಯಕ್ಷರಾಗಿ ರಂಗಪ್ಪ
5. ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ರಾಮಕೃಷ್ಣ ಡಿ.ಕೆ.
6. ವಿತರಕ ವಲಯದ ಗೌರವ ಕಾರ್ಯದರ್ಶಿ ಎಂ.ಎನ್. ಕುಮಾರ್
7. ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಎಲ್. ಸಿ. ಕುಶಾಲ್
8. ಖಜಾಂಚಿಯಾಗಿ ಮಾದೇವ್ (ಚಿಂಗಾರಿ)
ವಾಣಿಜ್ಯ ಮಂಡಳಿಯ ಒಟ್ಟು ಮತದಾರರ ಸಂಖ್ಯೆ 1409 ಇದ್ದು, ನಿರ್ಮಾಪಕ , ವಿತರಕ ಹಾಗೂ ಪ್ರದರ್ಶಕ ವಲಯದ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.