ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ : ಡಿ.ಕೆ.ಶಿವಕುಮಾರ್

Update: 2024-12-20 19:31 IST
Photo of D.K.Shivakumar

ಡಿ.ಕೆ.ಶಿವಕುಮಾರ್

  • whatsapp icon

ಬೆಳಗಾವಿ : ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿಯ ವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರಕಾರದ ಮುಂದೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುರುವಾರ ವಿಧಾನಸಭೆಯ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಶರತ್ ಬಚ್ಛೆಗೌಡ ಕೇಳಿದ ಪ್ರಶ್ನಗೆ ಉತ್ತರ ನೀಡಿದ ಅವರು, ಈ ವಿಚಾರವಾಗಿ ಶರತ್ ಹೋರಾಟ ಮಾಡುತ್ತಿದ್ದಾರೆ. ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿದೆ. ಸಾಮಾನ್ಯ ರೈಲಿನಲ್ಲಿ ಕೋಲಾರದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ದಿನ ನಿತ್ಯ ಸಂಚರಿಸುತ್ತಾರೆ. ಐಟಿ ಕಾರಿಡಾರ್ ಬಹುತೇಕ ಹೊಸಕೋಟೆ ಮುಟ್ಟಿದೆ. ಹೀಗಾಗಿ ಮೆಟ್ರೋ ಅವಶ್ಯಕತೆ ಇದೆ ಎಂದರು.

ಮಾರ್ಗ ವಿಸ್ತರಣೆ ವಿಚಾರವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ. ನಮ್ಮ ಸರಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ. ಹೊಸಕೋಟೆ ಜತೆಗೆ ಬಿಡದಿ, ನೆಲಮಂಗಲದ ವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಯೋಜನೆ ಸಿದ್ಧಡಿಸಲು ವರದಿ ರೂಪಿಸಲಾಗುತ್ತಿದೆ. ನಾವು ನಿಮ್ಮ ಮನವಿಯನ್ನು ಪರಿಗಣಿಸಿದ್ದೇವೆ ಎಂದು ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News