ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ಸೇವೆ ವಿಸ್ತರಣೆ

Update: 2024-12-27 12:59 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು(ಬಿಎಂಆರ್ಸಿಎಲ್) 2025ರ ಹೊಸ ವರ್ಷದ ಅಂಗವಾಗಿ ಮೆಟ್ರೋ ರೈಲು ಸೇವಾವಧಿಯನ್ನು ವಿಸ್ತರಿಸಿದೆ.

ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು ಜ.1 ರಂದು ಮುಂಜಾನೆ 2 ಗಂಟೆಗೆ ಎಲ್ಲ ಟರ್ಮಿನಲ್‍ನ ನಿಲ್ದಾಣಗಳಿಂದ ಹೊರಡಲಿದ್ದು, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ(ಮೆಜೆಸ್ಟಿಕ್)ನಿಂದ ಕೊನೆಯ ರೈಲು ಎಲ್ಲ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2:40 ಗಂಟೆಗೆ ಹೊರಡುತ್ತವೆ.

ರೈಲುಗಳು ಡಿ.31ರ ರಾತ್ರಿ 11ರಿಂದ ದಿನದ ಜ.1ರ ಮುಂಜಾನೆ 2ಗಂಟೆಯವರೆಗೆ 10 ನಿಮಿಷಗಳ ಮಧ್ಯಂತರದಲ್ಲಿ ಕಾರ್ಯನಿರ್ವಹಿಸುತ್ತವೆ. ಆದರೆ ಎಂ.ಜಿ.ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಡಿ.31ರಂದು ರಾತ್ರಿ 11 ಗಂಟೆಯಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದ ದ್ವಾರಗಳನ್ನು ಮುಚ್ಚಲಾಗುತ್ತದೆ. ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‍ನಲ್ಲಿ ರೈಲುಗಳು ನಿಲ್ಲುತ್ತವೆ.

ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಗಮ್ಯಸ್ಥಾನಕ್ಕೆ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು 50 ರೂ. ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೇಟ್‍ಅನ್ನು ಬಳಸಲು ಶೂಚಿಸಲಾಗಿದೆ. ಈ ಕಾಗದ ಟಿಕೇಟ್‍ಅನ್ನು ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಡಿ.31ರ ಬೆಳಗ್ಗೆ 8 ಗಂಟೆಯಿಂದ ಮುಂಗಡವಾಗಿ ಖರೀದಿಸಲು ಲಭ್ಯವಿದೆ.

ಸಾಮಾನ್ಯ ಕ್ಯೂಆರ್ ಕೋಡ್ ಟಿಕೆಟ್ ಮತ್ತು ಕಾರ್ಡ್‍ಗಳಿಂದ ಈ ನಿಲ್ದಾಣಗಳಿಂದ ಪ್ರಯಾಣಿಸಲು ಮಾನ್ಯವಾಗಿರುತ್ತವೆ. ವೈಟ್‍ಫೀಲ್ಡ್ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ಕಡೆಗೆ ಹೋಗುವವರು ಪ್ರಯಾಣಕ್ಕಾಗಿ ಟ್ರಿನಿಟಿ ಮೆಟ್ರೋ ನಿಲ್ದಾಣವನ್ನು ಬಳಸಬಹುದು. ಚಲ್ಲಘಟ್ಟ ಹಾಗೂ ಮಾದಾವರಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News