‘ಅಂಗನವಾಡಿ’ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Update: 2024-06-19 13:09 GMT

ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರಕ್ಕೆ (ಎಂಎಸ್‍ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬುಧವಾರ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು.

ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು. ಜೊತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು.

ಈ ವೇಳೆ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರಿಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ್, ವಿಶೇಷೇಧಿಕಾರಿ ಎನ್.ಎಚ್.ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದರಾಮಪ್ಪ ಉಪಸ್ಥಿತರಿದ್ದರು.

Delete Edit
Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News