ಡೆಂಗ್ಯೂ ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಮುಖ್ಯ : ಸಚಿವ ರಾಮಲಿಂಗಾರೆಡ್ಡಿ

Update: 2024-07-05 16:00 GMT

ಬೆಂಗಳೂರು: ಮನೆ ಸುತ್ತಮುತ್ತಲಿನ ವಾತವರಣದ ಸ್ವಚ್ಚತೆ ಕಾಪಾಡಿ, ಎರಡು ದಿನವಾದರೂ ಜ್ವರ ವಾಸಿಯಾಗದಿದ್ದರೆ, ಕೊಡಲೆ ಬಿಬಿಎಂಪಿ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಡೆಂಗ್ಯೂ ನಿಯಂತ್ರಿಸಲು ಸರಕಾರದ ಜೊತೆಯಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಡೆಂಗ್ಯೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲೆಂದರಲ್ಲಿ ಕಸ ಬಿಸಾಡಬಾರದು. ಮತ್ತು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ, ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಸರಕಾರ ಕಟಿಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಸೌಮ್ಯರೆಡ್ಡಿ, ಜಯನಗರ ವಿಧಾನಸಭಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎನ್.ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News