ಬೆಂಗಳೂರು | ಮಾಜಿ ಸಂಸದ ಎಂ.ಶ್ರೀನಿವಾಸ್ ನಿಧನ

Update: 2025-01-16 16:19 GMT

ಬೆಂಗಳೂರು : ಈ ಹಿಂದಿನ ಉತ್ತರಹಳ್ಳಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದ ಆಯ್ಕೆಯಾಗಿದ್ದ ಬಿಜೆಪಿ ಹಿರಿಯ ನಾಯಕ ಎಂ.ಶ್ರೀನಿವಾಸ್(83) ಗುರುವಾರ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆಯನ್ನು ಅವರು ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಅವರು ಪತ್ನಿ, ಪುತ್ರ ವೆಂಕಟೇಶ್, ಪುತ್ರಿಯರನ್ನು ಅಗಲಿದ್ದಾರೆ. ಎಂ.ಶ್ರೀನಿವಾಸ್ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪರ ಸಹೋದರರಾಗಿದ್ದಾರೆ. ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಜಯನಗರದ 7ನೆ ಬ್ಲಾಕ್‍ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದ ವರೆಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಅಲ್ಲಿಯೇ ಹಲವು ನಾಯಕರು ಅಂತಿಮ ದರ್ಶನ ಪಡೆದರು.

ನಾಳೆ(ಜ.17) ಬೆಳಗ್ಗೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಉತ್ತರಹಳ್ಳಿ ಸರ್ಕಲ್‍ನಲ್ಲಿರುವ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಬಳಿ ಇರುವ ಆರ್‌ಎಂಎಸ್ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News