ಕೇಂದ್ರ ಸರಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ : ಮುಖ್ಯಮಂತ್ರಿ ಚಂದ್ರು
ಬೆಂಗಳೂರು : ಕೇಜ್ರಿವಾಲ್ ಅವರನ್ನು ಜೈಲಿನಲ್ಲೇ ಮುಗಿಸಲು ಕೇಂದ್ರ ಸರಕಾರ ಸಂಚು ರೂಪಿಸಿದೆ. ಕೇಂದ್ರ ಸರಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಜನ ಬುದ್ಧಿ ಕಲಿಸುವ ದಿನ ದೂರವಿಲ್ಲ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಅಕ್ರಮ ಬಂಧನವನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಬಂಧನ ಪ್ರಕರಣದಲ್ಲಿ ಸಾಕ್ಷಿಗಳಿಲ್ಲ ಎಂದು ಸುಪ್ರೀಂಕೋರ್ಟ್ ಛೀಮಾರಿ ಹಾಕಿ, ಜಾಮೀನು ನೀಡಬಹುದು ಎಂದು ಹೇಳಿದರೂ, ಅವರನ್ನು ದುರುದ್ದೇಶಪೂರ್ವಕವಾಗಿ ಜೈಲಿನಲ್ಲಿರಿಸಲು ನರೇಂದ್ರ ಮೋದಿ ನೇತೃತ್ವದ ಸರಕಾರ ಸಂಚು ಮಾಡಿದೆ ಎಂದು ಕಿಡಿಕಾರಿದರು.
ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್ ಹನುಮಂತಯ್ಯ ಮಾತನಾಡಿ, ‘ಕೇಜ್ರಿವಾಲ್ ಅವರಿಗೆ ಸೂಕ್ತ ಚಿಕಿತ್ಸೆ ಸಿಗದಂತೆ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮೋದಿ ಸರಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶನ ಮಾಡುತ್ತಿದ್ದು, ಕೂಡಲೇ ಅರವಿಂದ್ ಕೇಜ್ರಿವಾಲ್ ಅವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.